ಮನೆ ಮನರಂಜನೆ ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

Join Our Whatsapp Group

ನಯನತಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು  ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ  ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.