ಮಂಡ್ಯ: ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮುಖ್ಯಮಂತ್ರಿಗಳು ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಯ ನಂತರ ಕೆಆರ್.ಎಸ್ ಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ವೇದಿಕೆ, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಯಲ್ಲಿ ಯಾವುದೇ ಲೋಪ ಉಂಟಾಗದAತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ಸೂಚನೆ ನೀಡಿದರು.














