ಚಿಕ್ಕಬಳ್ಳಾಪುರ: ರಿಯಲ್ ಎಸ್ಟೇಟ್ ಹಾಗೂ ರಾಜಕೀಯದಲ್ಲಿ ಸಕ್ರಿಯವಾಗಿದ್ದ ಕಾಣಿಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಬೈರಗಾನಗಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬವರು ಕೊಲೆಯಾದ ವ್ಯಕ್ತಿ.
ರಾಜಕೀಯದಲ್ಲಿ ಗುರುಸಿಕೊಂಡಿದ್ದ ನಾರಾಯಣಸ್ವಾಮಿ ದಲಿತ ಸಂಘಟನೆಯ ಮುಖಂಡರು ಆಗಿದ್ದರು.
ಗುರುವಾರ ಸಂಜೆ ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ನಾರಾಯಣಸ್ವಾಮಿ ಚಲಿಸುತ್ತಿದ್ದ ಓಮಿನಿ ರಸ್ತೆ ಬದಿ ನಿಂತಿದೆ. ಕಾರು ನಿಲ್ಲಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ನಾರಾಯಣಸ್ವಾಮಿಯ ಕೊಲೆಯಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್ ಹಾಗೂ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.
Saval TV on YouTube