ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ರಕ್ಷಾ ರಾಮಯ್ಯ ವಿರುದ್ಧ ೧ ಲಕ್ಷ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.
೨೦೧೯ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್?ನ ಎಂ.ವೀರಪ್ಪ ಮೊಯ್ಲಿ ಅವರನ್ನು ೧,೮೨,೧೧೦ ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ೨೦೧೯ರ ಚುನಾವಣೆಯಲ್ಲಿ ಬಿಜೆಪಿ ಶೇ.೫೩.೭೪ರಷ್ಟು ಮತಗಳನ್ನು ಪಡೆದಿತ್ತು. ೨೦೧೪ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂ.ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರನ್ನು ೯,೫೨೦ ಮತಗಳ ಕೆಲವೇ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ೩೩.೬೩% ಮತಗಳನ್ನು ಗಳಿಸಿದೆ.
೨೦೦೯ರ ಸಾರ್ವತ್ರಿಕ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಅಶ್ವತ್ಥನಾರಾಯಣ ಅವರನ್ನು ೫೧,೩೮೧ ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ ೩೯.೯% ಮತಗಳನ್ನು ಹೊಂದಿತ್ತು. ೨೦೧೪ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ೨೦೦೯ಕ್ಕೂ ಮೊದಲು ಕಾಂಗ್ರೆಸ್ ನ ಆರ್.ಎಲ್.ಜಾಲಪ್ಪ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.