ಮನೆ ರಾಜ್ಯ ಚಿಕ್ಕಮಗಳೂರು: ಸರಣಿ ಅಪಘಾತದಲ್ಲಿ ದಂಪತಿ ಸಾವು, ಮಗುವಿನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಸರಣಿ ಅಪಘಾತದಲ್ಲಿ ದಂಪತಿ ಸಾವು, ಮಗುವಿನ ಸ್ಥಿತಿ ಗಂಭೀರ

0

ಚಿಕ್ಕಮಗಳೂರು: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು,  ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಘಟನೆಯಲ್ಲಿ ಶಿವಮೊಗ್ಗ ಮೂಲದ ಸೈಯದ್ ಆಸಿಫ್ (38) ಹಾಗೂ ಮಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿಗಳು ಶಿವಮೊಗ್ಗ ಮೂಲದವರಾಗಿದ್ದು, ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನವಾಟ್ಸ್​ ಆ್ಯಪ್ ​ನಲ್ಲಿ ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ
ಮುಂದಿನ ಲೇಖನಬೈಕ್‌ – ಬಸ್‌ ನಡುವೆ ಅಪಘಾತ: ಸವಾರ ಸಾವು