ಮನೆ ರಾಜ್ಯ ಚಿಕ್ಕಮಗಳೂರು: ಹುಲಿ ದಾಳಿಗೆ ಹಸು ಬಲಿ

ಚಿಕ್ಕಮಗಳೂರು: ಹುಲಿ ದಾಳಿಗೆ ಹಸು ಬಲಿ

0

ಚಿಕ್ಕಮಗಳೂರು: ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಮತ್ತಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ಮತ್ತಿಕಟ್ಟೆ ಬ್ಲೂ ಮೌಂಟೇನ್ ಎಸ್ಟೇಟ್ ಆನಂದ್ ಮಿಸ್ಕಿತ್ ಎಂಬುವವರಿಗೆ ಸೇರಿದ ಕಾಫಿ ಎಸ್ಟೇಟ್’​​ನಲ್ಲಿ ಹುಲಿ ಹಸುವಿನ ಮೇಲೆ ದಾಳಿ ಮಾಡಿ ಕೊಂದು ತಿಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗ್ರಾಮದ ಮಧುಸೂದನ್ ಚಂದ್ರಾವತಿ ಎಂಬುವವರಿಗೆ ಸೇರಿದ ಹಸು ಇದಾಗಿದೆ. ಸ್ಥಳಕ್ಕೆ ಉಪವಲಯ ಅಧಿಕಾರಿ ಉಮೇಶ್ ಮತ್ತು ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದ ಕುಟುಂಬ ಈಗ ಬೆಲೆ ಬಾಳುವ ಹಸುವನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದ ಬಡ ಕುಟುಂಬಕ್ಕೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಬಣಕಲ್ ಹೋಬಳಿ ಹೆಗ್ಗುಡ್ಲು, ಮತ್ತಿಕಟ್ಟೆ, ಬಿ.ಹೊಸಳ್ಳಿ, ಬೆಳಗೋಡು, ತಳವಾರ ಹಾಗೂ ಭಾರತೀಬೈಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿಗಳ ದಾಳಿಗೆ ಹತ್ತಾರು ಜಾನುವಾರುಗಳು ಬಲಿಯಾಗಿವೆ. ನಿರಂತರವಾಗಿ ಗೋವುಗಳನ್ನು ಹಿಡಿದು ತಿನ್ನುತ್ತಿರುವ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಸ್ಥಳೀಯ ರೈತರು ಒತ್ತಾಯಿಸುತ್ತಲೇ ಇದ್ದಾರೆ. ಆದರೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿನ ಲೇಖನಪತಿಯ ಮನೆಯಲ್ಲಿ ಕಿರುಕುಳ ಆರೋಪ: ನವ ವಿವಾಹಿತೆ ನೇಣಿಗೆ ಶರಣು
ಮುಂದಿನ ಲೇಖನ64.13 ಲಕ್ಷ ಪ್ರಕರಣ ಸಂಧಾನ ಮುಖೇನ ಇತ್ಯರ್ಥ; ಸಾರ್ವಕಾಲಿಕ ದಾಖಲೆ: ನ್ಯಾ. ವೀರಪ್ಪ