ಮನೆ ಅಪರಾಧ ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿದ್ದ ಆರೋಪಿಗಳ ಬಂಧನ

ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿದ್ದ ಆರೋಪಿಗಳ ಬಂಧನ

0

ಚಿಕ್ಕಮಗಳೂರು: ಜಿಂಕೆಯನ್ನು ಬೇಟೆಯಾಡಿ ಬಾಡೂಟಕ್ಕೆ ತಯಾರಿ ನಡೆಸುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಭದ್ರ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯ ಅಂಚಿನಡಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲೂಕು ಹುಲ್ಲುವತ್ತಿ ಗ್ರಾಮದ ಕಾಫಿ ತೋಟಕ್ಕೆ‌ ಹೊಂದಿಕೊಂಡಿರುವ ಪ್ರದೇಶದಲ್ಲಿ ಜಿಂಕೆ‌ ಶಿಕಾರಿ ಮಾಡಿದ್ದು,  ಅಲ್ಲೇ ಬಾಡೂಟ ತಯಾರಿ ಮಾಡುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ಮಾಡಿ ಮೊಹಮ್ಮದ್ ಶಕೀಲ್ ಸೇರಿದಂತೆ ಆರು ಮಂದಿಯನ್ನು ಬಂಧಿಸಿ, ಜೊತೆಗೆ 8 ಕೆ.ಜಿ. ಜಿಂಕೆ ಮಾಂಸ ಹಾಗೂ ನಾಡ ಬಂದೂಕನ್ನು ವಶಕ್ಕೆ ಪಡೆದಿದ್ದಾರೆ.

ಹಿಂದಿನ ಲೇಖನಮಂಡ್ಯ: ಮನೆ ಜಮೀನಿನಲ್ಲಿದ್ದ ವಸ್ತುಗಳ ಕಳ್ಳತನ ಮಾಡಿದ್ದ ವ್ಯಕ್ತಿಯ ಬಂಧನ
ಮುಂದಿನ ಲೇಖನಚಂದ್ರಯಾನ-3: ವಿಕ್ರಮ್ ಲ್ಯಾಂಡರ್ ತೆಗೆದ ಚಂದ್ರನ ಚಿತ್ರಗಳನ್ನು ಹಂಚಿಕೊಂಡ ಇಸ್ರೋ