ಚಿಕ್ಕಮಗಳೂರು: ಕಾರ್ಮಿಕರ ನಡುವೆ ನಡೆದ ಮಾರಾಮಾರಿಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಹೋದ ವೈದ್ಯನ ಮೇಲೆಯೇ ಕಾರ್ಮಿಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ವೈದ್ಯರಾದ ಗಣೇಶ್ ಅವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅದೃಷ್ಟವಶಾತ್ ವೈದ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಕ್ಕ ಪಕ್ಕದ ತೋಟದ ಕಾರ್ಮಿಕರ ನಡುವೆ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಬಳಿಕ ಗಲಾಟೆ ಜೋರಾಗಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಒಂದು ತಂಡದ ಕಾರ್ಮಿಕರು ಗಾಯಗೊಂಡಿದ್ದರು. ಈ ವೇಳೆ ಅಲ್ಲಿಯ ಕೆಲವರು ವೈದ್ಯರಿಗೆ ಕರೆ ಮಾಡಿದ್ದಾರೆ ಕೂಡಲೇ ವೈದ್ಯರು ಘಟನಾ ಸ್ಥಳಕ್ಕೆ ಬಂದು ಚಿಕಿತ್ಸೆಗೆ ಮುಂದಾಗಿದ್ದಾರೆ. ಇದನ್ನು ಕಂಡ ಇನ್ನೊಂದು ತೋಟದ ಕಾರ್ಮಿಕರು ಚಿಕಿತ್ಸೆ ನೀಡಲು ಬಂದ ವೈದ್ಯರಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ.
ಕೂಡಲೇ ಗಂಭೀರ ಗಾಯಗೊಂಡ ವೈದ್ಯರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಚಿವ:
ವೈದ್ಯರ ಮೇಲೆ ಹಲ್ಲೆ ನಡೆಸಿರುವ ಕುರಿತು ಮಾಹಿತಿ ತಿಳಿದ ಸಚಿವ ದಿನೇಶ್ ಗುಂಡೂರಾವ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಅರೋಗ್ಯ ವಿಚಾರಿಸಿದರು.
ಘಟನೆಗೆ ಸಂಬಂಧಿಸಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.