ಮನೆ ಅಪರಾಧ ಚಿಕ್ಕಮಗಳೂರು: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿಗಳು

ಚಿಕ್ಕಮಗಳೂರು: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿಗಳು

0

ಚಿಕ್ಕಮಗಳೂರು: ಚಿಕ್ಕಮಗಳೂರು ಪುರಸಭೆಯ ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ  ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆ  8 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಲೆಗೆ ಸಾಕ್ಷ್ಯ ಸಮೇತ ಅಧಿಕಾರಿ ಮತ್ತು ಸಿಬ್ಬಂದಿ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಹಿಂದಿನ ಲೇಖನಯೋಗನರಸಿಂಹ, ತ್ರಿಕೂಟೇಶ್ವರ ನೆಲೆಸಿಹ ಗೊರೂರು
ಮುಂದಿನ ಲೇಖನಅರಕಲಗೂಡು ಕ್ಷೇತ್ರದ  ಜೆಡಿಎಸ್ ಅಭ್ಯರ್ಥಿ ನಾನೇ: ಮಾಜಿ ಸಚಿವ ಎ. ಮಂಜು