ಮನೆ ಕಾನೂನು ಚಿಕ್ಕಮಗಳೂರು: ರಾಜ್ಯದಲ್ಲಿ ಉಳಿದಿದ್ದ ಏಕೈಕ​ ನಕ್ಸಲ್​ ಶರಣಾಗತಿ

ಚಿಕ್ಕಮಗಳೂರು: ರಾಜ್ಯದಲ್ಲಿ ಉಳಿದಿದ್ದ ಏಕೈಕ​ ನಕ್ಸಲ್​ ಶರಣಾಗತಿ

0

ಚಿಕ್ಕಮಗಳೂರು: ಇತ್ತೀಚಿಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಆರು ಮಂದಿ ನಕ್ಸಲ್​ರು ಶರಣಾಗಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್​​ ಕೂಡ ​ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.

Join Our Whatsapp Group

ಕಳೆದ‌ 18 ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್​ ರವೀಂದ್ರ, ಎಸ್​ಪಿ ವಿಕ್ರಮ್ ಆಮ್ಟೆ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌‌ ಮುಂದೆ ಶರಣಾಗಿದ್ದಾರೆ. ನಕ್ಸಲ್​ ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ 7 ಲಕ್ಷ ರೂ. ಪ್ಯಾಕೇಜ್ ಹಣ ಘೋಷಣೆ ಮಾಡಿದೆ.

ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ ಕಳೆದ‌ 18 ವರ್ಷಗಳಿಂದ ನಕ್ಸಲ್​​ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್​ರ ನಾಯಕ ವಿಕ್ರಮ್ ಗೌಡ ಎನ್​ಕೌಂಟರ್​ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು. ರವೀಂದ್ರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹರಸಾಹಸ ಪಟ್ಟಿತ್ತು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಒಪ್ಪಿ ರವಿಂದ್ರ ಶರಣಾಗಿದ್ದಾರೆ.

ನಕ್ಸಲ್​ ರವೀಂದ್ರ ಒಟ್ಟು 26 ಪ್ರಕರಣಗಳಲ್ಲಿ ಬೇಕಾಗಿದ್ದಾರೆ. ನಕ್ಸಲ್​ ರವೀಂದ್ರ ವಿರುದ್ಧ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಕೇಸ್ ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 14 ಪ್ರಕರಣಗಳು ದಾಖಲಾಗಿವೆ.

22 ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕದಲ್ಲಿ ನಕ್ಸಲ್ ಶರಣಾಗತಿ ಆಪರೇಷನ್ ಮುಕ್ತಾಯಗೊಂಡಿದೆ. ನಕ್ಸಲ್ ಶರಣಾಗತಿ ಸಂಬಂಧ ಕಾರ್ಯ ನಿರ್ವಹಿಸಿರುವ 22 ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದ್ದಾರೆ.