ಚಿಕ್ಕೋಡಿ: ಗ್ಯಾಸ್ ಕಟರ್ ಬಳಸಿ ಎಸ್ ಬಿಐ ಎಟಿಎಂ ಕೊರೆದು ಲಕ್ಷಾಂತರ ರೂ. ಹಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಅಂಬೇಡ್ಕರ್ ನಗರ ಬಳಿ ತಡರಾತ್ರಿ ನಡೆದಿದೆ.
ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಎಸ್ ಬಿಐ ಎಟಿಂನಲ್ಲಿದ್ದ ಅಂದಾಜು 20 ಲಕ್ಷಕ್ಕೂ ಅಧಿಕ ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎಟಿಎಂನಲ್ಲಿ ಒಟ್ಟು ಎಷ್ಟು ಹಣ ಇತ್ತು ಎಂಬ ಬಗ್ಗೆ ಬ್ಯಾಂಕ್ ಸಿಬ್ಬಂದಿ ಮತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಎಸ್ ಬಿಐ ಎಟಿಎಂ ಕೊರೆದು ಹಣ ದೋಚಿ ದುಷ್ಕರ್ಮಿಗಳು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಎಟಿಎಂನಲ್ಲೂ ಕಳ್ಳತನಕ್ಕೆ ಯತ್ನಿಸಿದ್ದು, ವಿಫಲರಾಗಿದ್ದಾರೆ.
ಸದ್ಯ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು, ಎಫ್ ಎಸ್ ಎಲ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.