ಮನೆ ಅಪರಾಧ ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

0

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ಮೃತ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಆಕೆಯ ಪತಿ ಅವಿನಾಶ್ (32) ಹತ್ಯೆಗೈದ ಆರೋಪಿಯಾಗಿದ್ದಾನೆ. ಇಬ್ಬರು 4 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ.‌

ಸ್ಥಳೀಯ ಮೂಲಗಳ ಪ್ರಕಾರ, ಈ ದಂಪತಿ ಮೊದಲು ಪರಸ್ಪರ ಪ್ರೀತಿಸಿ ಮದುವೆಯಾದ ಜೋಡಿಯಾಗಿದ್ದರು. ಅವರಿಗೆ ಈಗ ಎರಡೂವರೆ ವರ್ಷದ ಹೆಣ್ಣು ಮಗು ಇದೆ. ಸಮೀಪದ ಸಂಬಂಧಿಕರ ಮದುವೆಯೊಂದರಲ್ಲಿ ಕಳೆದ ವಾರವಷ್ಟೆ ಪಾಲ್ಗೊಂಡಿದ್ದರು. ಆ ಸಂದರ್ಭದಲ್ಲಿ ಇಬ್ಬರೂ ಖುಷಿಯಿಂದ ಕಾಣಿಸಿಕೊಂಡಿದ್ದರೂ ಎನ್ನಲಾಗಿದೆ.

ಮೃತ ಕೀರ್ತಿ 4 ತಿಂಗಳ ಗರ್ಭಿಣಿಯಾಗಿದ್ದು ಮನೆಯವರಿಗೆ ಗೊತ್ತಿಲ್ಲದಂತೆ ಅಬಾರ್ಷನ್ ಕೂಡ ಮಾಡಿಸಿದ್ದನಂತೆ. ಅಲ್ಲದೇ ಪತಿ ಅವಿನಾಶ್ ನಿರಂತರವಾಗಿ ಡಿವೋರ್ಸ್ ನೀಡುವಂತೆ ದಬ್ಬಾಳಿಕೆ ಮಾಡುತ್ತಿದ್ದ ಎಂದು ಕೀರ್ತಿಯ ಪೋಷಕರು ಆರೋಪಿಸಿದ್ದಾರೆ.

ಈ ಬೆಳಿಗ್ಗೆ ಕೀರ್ತಿ ತನ್ನ ತಾಯಿಯ ಮನೆಯಲ್ಲಿದ್ದು, ಬಟ್ಟೆ ತೊಳೆಯಲು ಹೊರಟ್ಟಿದ್ದ ವೇಳೆ ಅವಿನಾಶ್ ಕತ್ತಿಯಿಂದ ದಾಳಿ ಮಾಡಿ, ಸುಮಾರು 10 ಬಾರಿ ಇರಿದಿದ್ದಾನೆ. ಕೂಡಲೇ ಆಕೆಯೇ ಆತನನ್ನ ತಳ್ಳಿ, ರಕ್ತದ ಮಡುವಿನಲ್ಲೇ ರಸ್ತೆಗೆ ಬಂದು ಕೂಗಾಡಿದಾಗ ಮನೆಯವರು, ಅಕ್ಕಪಕ್ಕದವರು ಆಕೆಯನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೀರ್ತಿ ಸಾವನ್ನಪ್ಪಿದ್ದಾಳೆ‌. ಕೊಲೆಗೆ ಅವಿನಾಶ್ ಅಕ್ಕನೇ ಕಾರಣ ಎಂದು ಕೀರ್ತಿ ಪೋಷಕರು ಆರೋಪಿಸಿದ್ದಾರೆ.

ಈ ಘಟನೆಯ ನಂತರ ಅವಿನಾಶ್ ಸ್ಥಳದಿಂದ ಪರಾರಿಯಾಗಿದ್ದು, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.