ಮನೆ ಕಾನೂನು ಚಿಕ್ಕಮಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಚಿಕ್ಕಮಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

0

ಚಿಕ್ಕಮಗಳೂರು: ಲೋಕಸಭೆ‌ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು  ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈ ಗೊಂಡಿದೆ.

Join Our Whatsapp Group

ಜಿಲ್ಲೆಯ ಗಡಿಭಾಗ ಸೇರಿದಂತೆ ಇತರೆ ಕಡೆಗಳಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ ಪಡೆದಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಕಡೂರು ಪಟ್ಟಣದ ಜೈನ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಇಬ್ಬರು ವ್ಯಕ್ತಿಗಳನ್ನು ತಪಾಸಣೆ ಒಳಪಡಿಸಿದಾಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.