Saval TV on YouTube
ತಿರುವನಂತಪುರಂ: ವಿದ್ಯಾರ್ಥಿಗಳು ಶಿಕ್ಷಕರನ್ನು ‘ಸರ್, ‘ಮೇಡಂ‘ ಎನ್ನುವ ಬದಲು ‘ಟೀಚರ್‘ ಎಂದು ಕರೆಯುವಂತೆ ಸೂಚಿಸಬೇಕು ಎಂದು ರಾಜ್ಯದ ಎಲ್ಲಾ ಶಾಲೆಗಳಿಗೆ ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ನಿರ್ದೇಶನ ನೀಡಿದೆ.
‘ಸರ್‘, ‘ಮೇಡಂ‘ ಅನ್ನುವುದಕ್ಕಿಂತ ‘ಟೀಚರ್‘ ಎನ್ನುವ ಪದ ‘ಲಿಂಗ ತಟಸ್ಥ‘ವಾಗಿರುವುದರಿಂದ ಹೀಗೆ ಕರೆಯಬೇಕು ಎಂದು ಸೂಚಿಸಿದೆ.
ಅಲ್ಲದೇ ಶಿಕ್ಷಕರು ಕೂಡ ಈ ಪದಗಳನ್ನು ಬಳಕೆ ಮಾಡುವುದನ್ನು ಕಡಿಮೆ ಮಾಡಬೇಕು ಎಂದಿದೆ.
ಆಯೋಗದ ಮುಖ್ಯಸ್ಥರಾದ ಕೆ.ವಿ ಮನೋಜ್ ಕುಮಾರ್ ಹಾಗೂ ಸದಸ್ಯ ಸಿ. ವಿಜಯ್ ಕುಮಾರ್ ಅವರು, ರಾಜ್ಯದ ಶಿಕ್ಷಣ ಇಲಾಖೆಗೆ ಈ ನಿರ್ದೇಶನ ನೀಡಿದ್ದಾರೆ.
ಸಮಾನತೆ ಹಾಗೂ ಶಿಕ್ಷಕರೊಂದಿಗಿನ ಬಾಂಧವ್ಯ ಹೆಚ್ಚಿಸುವ ಸಲುವಾಗಿ ಇಂಥಹದ್ದೊಂದು ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.