ಮೈಸೂರು: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮೈಸೂರು ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಪ್ರಯುಕ್ತ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದ್ದು, ಪಟಾಕಿ ತಯಾರಿಕೆ, ಮಾರಾಟ ಹಾಗೂ ಇತರೆ ಪ್ರಕ್ರಿಯೆಗಳು ಅಪಾಯಕಾರಿ ಉದ್ದಿಮೆಗಳ ವ್ಯಾಪ್ತಿಗೆ ಬರುವುದರಿಂದ ಸದರಿ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು. ತಪ್ಪಿದ್ದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ ಕಾಯ್ದೆ) ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು.
ಮೈಸೂರು ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.