ಮನೆ ರಾಜ್ಯ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ‘ಜನರ ನಡುವೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯ್ತು’ : ಚಂದನ್...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ‘ಜನರ ನಡುವೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯ್ತು’ : ಚಂದನ್ ಶೆಟ್ಟಿ

0

ಬೆಂಗಳೂರು: ಐಪಿಎಲ್ 2025ನಲ್ಲಿ ಆರ್‌ಸಿಬಿ ತಂಡದ ಐತಿಹಾಸಿಕ ಗೆಲುವನ್ನು ಹಬ್ಬದಂತೆ ಆಚರಿಸಲು ರಾಜ್ಯದಾದ್ಯಂತ ಅಭಿಮಾನಿಗಳು ಸಜ್ಜಾಗಿದ್ದರು. ಆದರೆ, ಬೃಹತ್ ಜನಸಂದಣಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವಿಗೀಡಾದರು. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಈ ಘಟನೆ ಕುರಿತಂತೆ ಜನಪ್ರಿಯ ರ‍್ಯಾಪರ್ ಚಂದನ್ ಶೆಟ್ಟಿಯವರು ತಮ್ಮ ಅನುಭವವನ್ನು ಬಹಿರಂಗಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಚಂದನ್ ಶೆಟ್ಟಿ, “ಘಟನೆಯನ್ನು ನಾನು ಕಣ್ಣಾರೆ ನೋಡಿದೆ. ನನಗೆ ಗೇಟ್ ನಂಬರ್ 3 ರಲ್ಲಿ ಪ್ರವೇಶಪತ್ರ (ಪಾಸ್) ಸಿಕ್ಕಿತ್ತು. ಆದರೆ, ಅಷ್ಟು ಜನ ಸೇರಿದ್ದರು ಎಂಬ ಕಾರಣದಿಂದ ಆ ಗೇಟಿಗೆ ಹೋಗಲು ಸಾಧ್ಯವಾಗಲಿಲ್ಲ. ನಂತರ ಗೇಟ್ ನಂಬರ್ 10 ಕಡೆ ಹೋದೆ, ಆದರೆ ಅಲ್ಲೂ ತೀವ್ರ ಗದ್ದಲ ಮತ್ತು ಅಟ್ಟಹಾಸ. ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟವಾಯಿತು” ಎಂದು ಹೇಳಿಕೆ ನೀಡಿದ್ದಾರೆ.

ಕಾಲ್ತುಳಿತದ ಪರಿಣಾಮವಾಗಿ ಮೃತಪಟ್ಟ 11 ಮಂದಿಯ ಪೋಷಕರು ಹಾಗೂ ಕುಟುಂಬಸ್ಥರಿಗೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಯ ನಂತರ ರಾತ್ರೋರಾತ್ರಿ ಹಸ್ತಾಂತರಿಸಲಾಗಿದೆ. ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಸರ್ಕಾರ ಈ ದುರ್ಘಟನೆಯ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದೆ ಮತ್ತು ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ.