ಮನೆ ರಾಜ್ಯ ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್, ದೆಹಲಿಗೆ ತೆರಳಿದ ಸಿಎಂ ಮತ್ತು ಡಿಸಿಎಂ

ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್, ದೆಹಲಿಗೆ ತೆರಳಿದ ಸಿಎಂ ಮತ್ತು ಡಿಸಿಎಂ

0

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಹೈಕಮಾಂಡ್ ಬುಲಾವ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ಸಿಎಂ ಮತ್ತು ಡಿಸಿಎಂ ಇಬ್ಬರೂ ಇಂದು ಬೆಳಗ್ಗೆ ತಮ್ಮ-ತಮ್ಮ ನಿವಾಸಗಳಿಂದ ಹೊರಟು, ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನೇರವಾಗಿ ವಿಮಾನ ನಿಲ್ದಾಣದತ್ತ ತೆರಳಿದರೆ, ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಿಂದ ದೆಹಲಿಗೆ ಪಯಣಿಸಿದ್ದರು.

ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ಅವರನ್ನು ಇಬ್ಬರೂ ನಾಯಕರು ಜಂಟಿಯಾಗಿ ಭೇಟಿಯಾಗಲಿದ್ದಾರೆ. ಈ ಭೇಟಿ ವೇಳೆ ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದ ಕುರಿತು ವಿವರವಾದ ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗುವುದು ಎನ್ನಲಾಗಿದೆ.