ಮನೆ ಕ್ರೀಡೆ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಆರ್‌ಸಿಬಿ

0

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ ʼಆರ್‌ಸಿಬಿ ಕೇರ್ಸ್ʼ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ.

ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಶಕ್ತಿ. ಅದು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ಎಂದು ಸಂಬಂಧ ಆರ್‌ಸಿಬಿ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಜಾಗವನ್ನು ಯಾವ ಸಹಾಯವೂ ತುಂಬಲಾರದು. ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ನೆರವು ನೀಡುತ್ತಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ.

ಇದು ಆರ್‌ಸಿಬಿ ಕೇರ್ಸ್‍ನ ಆರಂಭವೂ ಹೌದು. ಅವರ ನೆನಪನ್ನೂ ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ಬದ್ಧತೆಯಾಗಿದೆ ಎಂದು ಪೋಸ್ಟ್‍ನಲ್ಲಿ ಭಾವನಾತ್ಮಕವಾಗಿ ಬರೆದು ಹಂಚಿಕೊಂಡಿದೆ.