ಡೆಹ್ರಾಡೂನ್: ಪ್ರೇಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಝಂಜ್ರಾ ಪ್ರದೇಶದ ಖಾಲಿ ಜಾಗದಲ್ಲಿ ಇರಿಸಿದ್ದ ಸಿಲಿಂಡರ್ ಗಳಿಂದ ಮಂಗಳವಾರ ಬೆಳಿಗ್ಗೆ ಕ್ಲೋರಿನ್ ಅನಿಲ ಸೋರಿಕೆಯಾದ ಪರಿಣಾಮ ಸ್ಥಳೀಯರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.
ಘಟನೆಯ ಮಾಹಿತಿ ತಿಳಿದ ಪೊಲೀಸರು, ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣೆ (ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್) ಮತ್ತು ಅಗ್ನಿಶಾಮ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಇಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ.
ಸಿಲಿಂಡರ್ ಗಳ ಸುರಕ್ಷಿತ ವಿಲೇವಾರಿಗೆ ಕಾರ್ಯಾಚರಣೆ ಆರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.