ಮನೆ ರಾಜ್ಯ ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸದಿದ್ದರೆ ಕ್ರೈಸ್ತರನ್ನು ಶ್ರೀರಾಮ ಸೇನೆ ಒದ್ದು ಓಡಿಸಲಿದೆ: ಪ್ರಮೋದ್‌ ಮುತಾಲಿಕ್ ಎಚ್ಚರಿಕೆ

ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸದಿದ್ದರೆ ಕ್ರೈಸ್ತರನ್ನು ಶ್ರೀರಾಮ ಸೇನೆ ಒದ್ದು ಓಡಿಸಲಿದೆ: ಪ್ರಮೋದ್‌ ಮುತಾಲಿಕ್ ಎಚ್ಚರಿಕೆ

0

ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿದ್ದು, ಶೇ. 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದೆ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಎಚ್ಚರಿಸಿದ್ದಾರೆ.

ಇಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮ್ಮ ಯಾವುದೇ ರೀತಿಯ ಭಜನೆ, ಪ್ರಾರ್ಥನೆ ಚರ್ಚ್‌ ಒಳಗೆ ಇರಲಿ. ಹೊರಗಡೆ, ತಾಂಡಾಗಳಲ್ಲಿ ಮೋಸ ಮಾಡಿ ನೀವು ಮಾಡುವ ಕೆಲಸವನ್ನು ಏಸು ಒಪ್ಪುವುದಿಲ್ಲ ಎಂದರು.

ತಾಂಡಾಗಳ ಬಡತನ, ಅನಕ್ಷರತೆಯನ್ನು ಬಳಸಿಕೊಂಡು, ಅವರಿಗೆ ಆಸೆ ತೋರಿಸಿ ಮಾಡುವ ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸಬೇಕು. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು. ಮತಾಂತರ ನಿಷೇಧ ಕಾಯ್ದೆ ಈಗಲೂ ಜಾರಿಯಲ್ಲಿದ್ದು, ಅದನ್ನು ಪಾಲಿಸಬೇಕು  ಎಂದು ಮುತಾಲಿಕ್ ಹೇಳಿದರು.