ಮನೆ ರಾಜಕೀಯ ಸಿ ಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣ ತನಿಖೆ ಸಿಐಡಿಗೆ: ಜಿ ಪರಮೇಶ್ವರ್​​

ಸಿ ಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣ ತನಿಖೆ ಸಿಐಡಿಗೆ: ಜಿ ಪರಮೇಶ್ವರ್​​

0

ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ  ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್​ ಹೇಳಿದರು.

Join Our Whatsapp Group

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಅಂತ ಹೇಳಿದ್ದಾರೆ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ, ಪೊಲೀಸರು ತನಿಖೆ ಮಾಡಬೇಕು ಎಂದರು.

ಹಳೇಹುಬ್ಬಳ್ಳಿ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದೇರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಗಾಂಧೀಜಿ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗುತ್ತೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದ ಹೇಳಿದರು.

ಏನಿದು ಪ್ರಕರಣ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಗುರುವಾರ (ಡಿ.19) ರಂದು ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಸದ್ಯ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.