ಮನೆ ರಾಜ್ಯ ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಗೃಹಸಚಿವ ಜಿ ಪರಮೇಶ್ವರ್​

ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಗೃಹಸಚಿವ ಜಿ ಪರಮೇಶ್ವರ್​

0

ತುಮಕೂರು: ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್​ ಗೆ ಉತ್ತರ ನೀಡಬೇಕಾಗುತ್ತದೆ ಎಂದು ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಪ್ರಶ್ನೆಗೆ ಗೃಹ ಸಚಿವ ಜಿ ಪರಮೇಶ್ವರ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

Join Our Whatsapp Group

ತುಮಕೂರಿನಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಜೂನ್ 17 ರಂದು  ವಿಚಾರಣೆಗೆ ಹಾಜರಾಗುತ್ತೇನೆ: ಬಿ ಎಸ್ ಯಡಿಯೂರಪ್ಪ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ, ಅಪಾಯ ಮನಗಂಡ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್​ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಮಾರ್ಚ್ 28 ರಂದು ನೀಡಿದ್ದ ನೋಟಿಸ್​​ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಹಿಂದಿನ ಲೇಖನ3 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು
ಮುಂದಿನ ಲೇಖನಹೆಚ್ ಎಸ್‌ ಆರ್‌ ಪಿ ಅಳವಡಿಸದವರಿಗೆ ಸಿಹಿ ಸುದ್ದಿ: ಗಡುವು ವಿಸ್ತರಣೆಗೆ ಒಪ್ಪಿಗೆ