ಕೇರಳ : ಅಗಲಿದ ಸಿಜೆ ರಾಯ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ನಟ ಮೋಹನ್ ಲಾಲ್, ಅವರು ‘ಸ್ನೇಹಿತನಿಗೂ ಮಿಗಿಲು’ ಎಂದು ಹೇಳಿಕೊಂಡಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು ಸಿಜೆ ರಾಯ್ ಅಗಲಿಕೆ ನನಗೆ ತೀವ್ರ ನೋವು ತಂದಿದೆ.
ಅವರ ಬಾಂಧವ್ಯ ಸ್ನೇಹವನ್ನೂ ಮೀರಿದ್ದು. ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಯಾವಾಗಲೂ ಅವರು ಮುಂಚೂಣಿಯಲ್ಲಿದ್ದರು ಎಂದು ಬರೆದುಕೊಂಡಿದ್ದಾರೆ. ಈ ದುಃಖದ ಸಮಯದಲ್ಲಿ ನಾನು ಅವರ ಕುಟುಂಬದ ಜೊತೆ ನಿಲ್ಲುತ್ತೇನೆ. ನಮ್ಮ ಸಂಬಂಧ ಸ್ನೇಹಕ್ಕಿಂತ ಹತ್ತಿರವಾಗಿತ್ತು. ಅವರನ್ನು ಯಾವಾಗಲೂ ಮರೆಯಲು ಸಾಧ್ಯವಿಲ್ಲ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.

ಕೇರಳ ಮೂಲದ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಸಿಇಓ ಸಿ.ಜೆ ರಾಯ್ ಅವರು ನೆನ್ನೆ (ಶುಕ್ರವಾರ-ಜ.30) ಬೆಂಗಳೂರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದಾಯ ತೆರಿಗೆ ಇಲಾಖೆಯಿಂದ ಪದೇ ಪದೇ ಆದ ದಾಳಿಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಸಂಬಂಧ ಕಾನ್ಫಿಡೆಂಟ್ ಗ್ರೂಪ್ ನಿರ್ದೇಶಕ ಟಿಜೆ ಜೋಸೆಫ್ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರು ಕೇಂದ್ರ ಡಿಸಿಪಿ ಪ್ರಕರಣದ ತನಿಖೆಯ ಉಸ್ತುವಾರಿ ವಹಿಸಿದ್ದಾರೆ.















