ಕೋಲಾರ (Kolara): ಗಣೇಶ ವಿಸರ್ಜನೆ ವೇಳೆ ಹಿಂದೂ-ಮುಸ್ಲಿಂ ಯುವಕರ ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಮೂವರು ಗಾಯಗೊಂಡಿರುವ ಘಟನೆ ಮುಳಬಾಗಿಲಿನಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ನೂಗಲಬಂಡೆ ಬಡಾವಣೆಯಲ್ಲಿ ಘಟನೆ ನಡೆದಿದೆ. ಗಾಯಗೊಂಡಿರುವ ಸುರೇಂದ್ರ, ಮನೋಜ್ ಹಾಗೂ ವೇಣುಗೋಪಾಲ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಂಬಂಧ ಮೂವರನ್ನು ಮುಳಬಾಗಲು ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅನ್ಯ ಕೋಮಿನ ಯುವಕರನ್ನು ಪ್ರಶ್ನೆ ಮಾಡುತ್ತಿದ್ದ ವೇಳೆ ಪಕ್ಕದಲ್ಲಿದ್ದ ಮತ್ತೋರ್ವ ಜಾಗ ಬಿಡಲಿಲ್ಲ ಎಂಬ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.