ನವದೆಹಲಿ: ಕೇಂದ್ರ ಸರ್ಕಾರದ 2023ನೇ ಸಾಲಿನ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶದ ಇಂದೋರ್ ನಗರ ಸತತ ಏಳನೇ ಬಾರಿಗೆ ಪಾತ್ರವಾಗಿದೆ.
ಗುಜರಾತ್ ನ ಸೂರತ್ ಮತ್ತು ಮಹಾರಾಷ್ಟ್ರದ ನವಿ ಮುಂಬೈ ನಗರಗಳು ನಂತರದ ಸ್ಥಾನದಲ್ಲಿವೆ. ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿಯಲ್ಲಿ ಉತ್ತಮ ಪ್ರದರ್ಶನ ತೋರಿದ ರಾಜ್ಯಗಳ ವಿಭಾಗದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನ ಪಡೆದಿದೆ. ನಂತರದ ಸ್ಥಾನಗಳಲ್ಲಿ ಮಧ್ಯಪ್ರದೇಶ ಮತ್ತು ಛತ್ತೀಸಗಢ ರಾಜ್ಯಗಳು ಇವೆ.
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ವೇಳೆ ಉಪಸ್ಥಿತರಿದ್ದರು.