ಮನೆ ರಾಷ್ಟ್ರೀಯ ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ

0

ಶಿಮ್ಲಾ : ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾಗಿದೆ.

ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ ಗುತ್ರಹಾನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯ ಪರಿಣಾಮ ವಾಹನ ಸವಾರರು ಪರದಾಡಬೇಕಾಯಿತು. ಶನಿವಾರ ಮತ್ತು ಭಾನುವಾರ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಟ್ಟಾರಿ-ಲೇಹ್ ರಸ್ತೆ (NH-3), ಆಟ್-ಸೈಂಜ್ ರಸ್ತೆ (NH-305) ಮತ್ತು ಅಮೃತಸರ-ಭೋಟಾ ರಸ್ತೆ (NH-503A) ಸೇರಿದಂತೆ ಒಟ್ಟು 503 ರಸ್ತೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿನ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ರಾಜ್ಯದಲ್ಲಿ ಸುಮಾರು 953 ವಿದ್ಯುತ್ ಪರಿವರ್ತಕಗಳು ಮತ್ತು 336 ನೀರು ಸರಬರಾಜು ಯೋಜನೆಗಳು ಅಸ್ತವ್ಯಸ್ತಗೊಂಡಿವೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ತಿಳಿಸಿದೆ.