ಬೆಂಗಳೂರು(Bengaluru) : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದವರು ಪ್ರತಿಭಟನೆ ಸಂಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರೊಂದಿಗೆ ಸಂಧಾನ ಸಭೆ ನಡೆಸಿದ್ದು, ಬೇಡಿಕೆ ಈಡೇರಿಕೆಗೆ ಒಪ್ಪಿಗೆ ನೀಡಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸದ ಮುಂದೆ ರೈತರು ಪ್ರತಿಭಟನೆ ನಡೆಸಿದ್ದು ಸಮಸ್ಯೆಗಳನ್ನು ಆಲಿಸಿದ ಸಿಎಂ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿನೀಡಿದ್ದಾರೆ. ಬಳಿಕ ರೈತ ನಿಯೋಗ ಪ್ರತಿಭಟನೆಯನ್ನು ಹಿಂಪಡೆಯುವ ನಿರ್ಧಾರವನ್ನು ಪ್ರಕಟಿಸಿದೆ.