ಮೈಸೂರು(Mysuru): ದಸರೆಯ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಶಾಸಕರಾದ ಎಲ್. ನಾಗೇಂದ್ರ ಸಾಥ್ ನೀಡಿದರು.
ಈ ಸಂದರ್ಭ ಮಾತನಾಡಿದ ಸಿಎಂ, ಕಳೆದ 2 ವರ್ಷಗಳಿಂದ ಅದ್ದೂರಿಯಾಗಿ ದಸರಾ ಆಚರಣೆ ಆಗಿಲ್ಲ. ಬಹಳ ನಿರ್ಬಂಧದಿಂದ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿ ದಸರಾವನ್ನ ವೈಭವದಿಂದ. ಆಚರಿಸುತ್ತಿದ್ಧೇವೆ. ರಾಜ್ಯ ವಿದೇಶದಿಂದ ಪ್ರವಾಸಿಗರು ಬರುತ್ತಿದ್ದಾರೆ. ಕರ್ನಾಟಕ ಜನತೆಗೆ ಶುಭವಾಗಲಿ ಎಂದರು.