ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚಿಸಲಾಗಿದೆ.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ.
25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ಮಾಡಲಾಗಿದೆ. ಈ ಸಮಿತಿಯಲ್ಲಿ 14 ಮಂದಿ ಸದಸ್ಯರಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಸಮಿತಿಗಳನ್ನು ರಚನೆ ಮಾಡಿದ್ದಾರೆ.