ಮನೆ ರಾಜ್ಯ ಬೆಂಗಳೂರು ಟೆಕ್ ಸಮಿಟ್: ಐಟಿ-ಬಿಟಿ ಕಂಪನಿಗಳ ಸಿಇಒಗಳೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ

ಬೆಂಗಳೂರು ಟೆಕ್ ಸಮಿಟ್: ಐಟಿ-ಬಿಟಿ ಕಂಪನಿಗಳ ಸಿಇಒಗಳೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ

0

ಬೆಂಗಳೂರು (Bengaluru) ಮುಖ್ಯಮಂತ್ರಿ (CM) ಬಸವರಾಜ ಬೊಮ್ಮಾಯಿ (Basavarj Bommai) ಅವರಿಂದು ಬೆಂಗಳೂರು ಟೆಕ್ ಸಮಿಟ್ 2022 (Bangalore Tech Summit 2022) ಅಂಗವಾಗಿ ಐಟಿ-ಬಿಟಿ ಕಂಪನಿಗಳ ಸಿಇಒಗಳೊಂದಿಗೆ ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ನಡೆದ ಟೆಕ್ ಸಮ್ಮಿಟ್ ಕುರಿತ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಟೆಕ್ ಸಮ್ಮಿಟ್ ಪೂರ್ವಭಾವಿ ಕುರಿತು ಚರ್ಚೆ ಆಗಿದೆ. ಬೆಂಗಳೂರಿನ ಮೂಲಭೂತ ಸೌಕರ್ಯ ಬಗ್ಗೆಯೂ ಚರ್ಚೆ ಆಗಿದೆ ಎಂದು ಹೇಳಿದರು.

ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆಲವು ಸಲಹೆ ನೀಡಿದ್ದಾರೆ. ಆ ಸಲಹೆಗಳಂತೆ ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಟೆಕ್ ಸಮಿಟ್ ಥೀಮ್ ಬಿಡುಗಡೆ ಮಾಡಿದರು.

ಐಟಿ ಬಿಟಿ ಖಾತೆ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಟೆಕ್ ಸಮಿಟ್ ಬ್ರೌಷರ್ ಬಿಡುಗಡೆ ಮಾಡಿದರು.

ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ, ಐಟಿ ದಿಗ್ಗಜರಾದ ಕ್ರಿಸ್ ಗೋಪಾಲಕೃಷ್ಣ ಮತ್ತಿತರ ಸಿಇಒಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹಿಂದಿನ ಲೇಖನನಕಲಿ ವೈದ್ಯರ ಬಳಿ ಐವಿಎಫ್‌ ಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಮುಂದಿನ ಲೇಖನಪ್ರಧಾನಿ ಮೋದಿ ಕಾಶ್ಮೀರ ಭೇಟಿಗೆ ಕ್ಯಾತೆ ತೆಗೆದ ಪಾಕಿಸ್ತಾನ