ಮನೆ ರಾಜ್ಯ ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ

0

ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಬೆಳಿಗ್ಗೆ ಜಿಮ್‌ ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಿವಿಧ ಪತ್ರಿಕೆ, ಟಿವಿ ಚಾನೆಲ್‌ ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.