ಬೆಂಗಳೂರು: ಮೋದಿ ಮುಖ ತೋರಿಸಿದರೂ ವೋಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬಸವರಾಜ್ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಖ್ಯಾತ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.
ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ!. ಯಡಿಯೂರಪ್ಪ ಅವರ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಟ್ವೀಟ್ ಮಾಡಿದೆ.
ಕಿಚ್ಚ ಸುದೀಪ್ ಸುದ್ದಿಗೋಷ್ಟಿಯಲ್ಲಿಮಾತನಾಡಿ, ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ , ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
Saval TV on YouTube