ಮನೆ ರಾಜ್ಯ 108 ಅಡಿ ಎತ್ತರದ ಮಹದೇಶ್ವರಸ್ವಾಮಿ ಪ್ರತಿಮೆ ಅನಾವರಣ ಮಾಡಿದ ಸಿಎಂ ಬೊಮ್ಮಾಯಿ

108 ಅಡಿ ಎತ್ತರದ ಮಹದೇಶ್ವರಸ್ವಾಮಿ ಪ್ರತಿಮೆ ಅನಾವರಣ ಮಾಡಿದ ಸಿಎಂ ಬೊಮ್ಮಾಯಿ

0

ಮಹದೇಶ್ವರ ಬೆಟ್ಟ: ಇಲ್ಲಿನ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಮಹದೇಶ್ವರಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣ ಮಾಡಿದರು.

ಕ್ರೇನ್ ಮೂಲಕ ಪ್ರತಿಮೆ ಬಳಿಗೆ ತೆರಳಿದ ಸಿ.ಎಂ, ಹುಲಿ ಮೇಲೆ‌ ಕುಳಿತ ಮಹದೇಶ್ವರಸ್ವಾಮಿಯ ಪ್ರತಿಮೆಯ ಪ್ರತಿಕೃತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅನಾವರಣ ಮಾಡಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಾಲೂರು ಮಠದ ಹಿರಿಯ ಸ್ವಾಮೀಜಿ ಗುರುಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್ ಮುಖ್ಯಮಂತ್ರಿ ಬೊಮ್ಮಾಯಿ ಅವರ ಜೊತೆಗಿದ್ದರು.

ಹಿಂದಿನ ಲೇಖನಯುಕ್ರೇನ್‌ ಯುದ್ಧಾಪರಾಧ: ಪುಟಿನ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯ
ಮುಂದಿನ ಲೇಖನಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ನೀರು: ಪ್ರಾಧಿಕಾರ ಸರಿ ಮಾಡಲಿದೆ ಎಂದ ಸಿಎಂ