ಮನೆ ರಾಜಕೀಯ ಇಂದು ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ: ವರಿಷ್ಠರ ಭೇಟಿ, ಸಂಪುಟ ವಿಸ್ತರಣೆ ಚರ್ಚೆ ಸಾಧ್ಯತೆ

ಇಂದು ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ: ವರಿಷ್ಠರ ಭೇಟಿ, ಸಂಪುಟ ವಿಸ್ತರಣೆ ಚರ್ಚೆ ಸಾಧ್ಯತೆ

0

ಬೆಂಗಳೂರು: ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಕೇಂದ್ರದ ನಾಯಕರು ಪಂಚ ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದು, ದೆಹಲಿಗೆ ಭೇಟಿ ನೀಡಲಿರುವ ಬೊಮ್ಮಾಯಿಯವರಿಗೆ ಪಕ್ಷದ ವರಿಷ್ಠರ ಭೇಟಿಗೆ ಅವಕಾಶ ಸಿಕ್ಕಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತಾರೆ ಎನ್ನಲಾಗಿದೆ.

ಅಲ್ಲದೇ  ಅಂತರ್ ರಾಜ್ಯ ಜಲ ವಿವಾದ ಕುರಿತು ಚರ್ಚೆ ನಡೆಸಲು ಕಾನೂನು ತಜ್ಞರನ್ನೂ ಭೇಟಿ ಮಾಡಲಾಗುತ್ತದೆ. ಮಾರ್ಚ್ ತಿಂಗಳಿನಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತಿದ್ದು, ಕೇಂದ್ರ ಬಜೆಟ್ ಕುರಿತಂತೆಯೂ ನಾಯಕರೊಂದಿಗೆ ಚರ್ಚೆ ನಡೆಸಲಾಗುತ್ತದೆ. ರಾಜ್ಯದ ಆರ್ಥಿಕ ಪರಿಸ್ಥಿತಿ, ಜಿಎಸ್’ಟಿ ಪರಿಹಾರದ ಕುರಿತು ಮಾತುಕತೆ ನಡೆಸಲಾಗುತ್ತದೆ. ವಿತ್ತ ಸಚಿವರ ಭೇಟಿಗೆ ಅವಕಾಶ ಕೇಳಲಾಗಿದೆ ಎಂದು ತಿಳಿಸಿದ್ದಾರೆ. 

ಸೀತಾರಾಮನ್ ಅವರು ಇತ್ತೀಚೆಗೆ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ನದಿ ಜೋಡಣೆ ಯೋಜನೆಗೆ ಹಸಿರು ನಿಶಾನೆ ತೋರಿರುವ ಹಿನ್ನೆಲೆಯಲ್ಲಿ ವಿತ್ತ ಸಚಿವರೊಂದಿಗಿನ ಬೊಮ್ಮಾಯಿಯವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ  ಪ್ರಾಥಮಿಕ ಶಿಕ್ಷಣ ಸಚಿವ ನಾಗೇಶ್, ಸಚಿವ ಸಂಪುಟ ವಿಸ್ತರಣೆ ವಿಚಾರ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆಯೇ ಹೊರತು ಬಿಜೆಪಿ ಅಥವಾ ಸರ್ಕಾರದಲ್ಲಿ ಅಲ್ಲ. ಬೊಮ್ಮಾಯಿ ಮತ್ತು ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಜ್ಯ ಬಜೆಟ್‌ಗೂ ಮುನ್ನ ಕೇಂದ್ರ ಸಚಿವರು, ರಾಜ್ಯದ ಸಂಸದರು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡಲು ಬೊಮ್ಮಾಯಿ ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ. “ರಾಜ್ಯ ಬಜೆಟ್‌ಗೂ ಮುನ್ನ ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಂಪ್ರದಾಯಗಳಿವೆ. ಬೊಮ್ಮಾಯಿ ಅವರ ದೆಹಲಿ ಭೇಟಿಗೆ ಬೇರೆ ಬಣ್ಣ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಗಾಯನ ನಿಲ್ಲಿಸಿದ ‘ಗಾನಕೋಗಿಲೆ’
ಮುಂದಿನ ಲೇಖನಮೈಸೂರಿನಲ್ಲಿ ಕೋವಿಡ್ ಗೆ 35 ಮಂದಿ ಬಲಿ: ಹೆಚ್ಚಿದ ಆತಂಕ