ಮಂಗಳೂರು(Mangaluru): ಸುಳ್ಯದಲ್ಲಿ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಗುರುವಾರ) ಸಂಜೆ 6.30ರ ಸುಮಾರಿಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಿಂದ 3.30ಕ್ಕೆ ಹೊರಟು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.25ಕ್ಕೆ ಬರಲಿರುವ ಮುಖ್ಯಮಂತ್ರಿ, ರಸ್ತೆ ಮಾರ್ಗವಾಗಿ ಸುಳ್ಯ ತಾಲ್ಲೂಕಿನ ಬೆಳ್ಳಾರೆಗೆ ಬಂದು, ಪ್ರವೀಣ್ ಕುಟುಂಬದ ಸದಸ್ಯರನ್ನು ಭೇಟಿ ಮಾಡುವರು. ರಾತ್ರಿ ಪುನಃ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ. . .