ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದು 112 ದಿನಗಳು ಕಳೆದರೂ ಇನ್ನೂ ವರ್ಗಾವಣೆ ಕುರಿತ ಮನವಿಗಳು ಮಾತ್ರ ನಿಂತಿಲ್ಲ. ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ಈಗಾಗಲೇ ಸಾಕಷ್ಟು ಆರೋಪಗಳು ಕೇಳಿಬಂದಿವೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಪಕ್ಕೆ ಬ್ರೇಕ್ ಹಾಕುವ ಕೆಲಸ ಮಾಡಿದ್ದಾರೆ.
ಮುಖ್ಯಮಂತ್ರಿಗಳು ಆಡಳಿತಾತ್ಮಕ ಕಾರಣಗಳಿಗಾಗಿ ಯಾವುದೇ ವರ್ಗಾವಣೆ ಕೋರಿಕೆಗಳನ್ನು ಸ್ವೀಕರಿಸಬಾರದು ಎಂದು ತಮ್ಮ ಸಂಪುಟದ ಸಚಿವರು, ಶಾಸಕರು ಮತ್ತು ಎಂಎಲ್ಸಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.
Saval TV on YouTube