ಮನೆ ಕ್ರೀಡೆ ವಿಶ್ವ ಕಿರೀಟ ಗೆದ್ದ ವನಿತೆಯರಿಗೆ ಸಿಎಂ, ಡಿಸಿಎಂ ವಿಶ್‌

ವಿಶ್ವ ಕಿರೀಟ ಗೆದ್ದ ವನಿತೆಯರಿಗೆ ಸಿಎಂ, ಡಿಸಿಎಂ ವಿಶ್‌

0

ಬೆಂಗಳೂರು : ಚೊಚ್ಚಲ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆಗಳು. ಇಡೀ‌ ಪಂದ್ಯಾವಳಿಯುದ್ದಕ್ಕೂ ಅತ್ಯಂತ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿದ್ದ, ಭಾರತೀಯ ಆಟಗಾರ್ತಿಯರು ನಿಜಕ್ಕೂ ಈ ಪ್ರಶಸ್ತಿಗೆ ಅರ್ಹರು. ಕ್ರಿಕೆಟ್ ಪ್ರೇಮಿಯಾದ ನನಗಿದು ಹೆಚ್ಚು ಖುಷಿ ಕೊಟ್ಟಿದೆ. ಇತಿಹಾಸ ಸೃಷ್ಟಿಯಾದ ಈ ದಿನ ಬಹುಕಾಲ ನೆನಪಿನಲ್ಲಿ ಉಳಿಯುವಂತಹುದ್ದು.

ʻವಿಶ್ವ ಚಾಂಪಿಯನ್ಸ್ ಭಾರತʼ… 2025ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ನಿಮ್ಮ ಗೆಲುವು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಮತ್ತು ಕನಸು ಕಾಣುವ ಪ್ರತಿಯೊಬ್ಬ ಯುವತಿಯಿಗೂ ಸ್ಫೂರ್ತಿ ಅಂತ ವಿಶ್‌ ಮಾಡಿದ್ದಾರೆ.

ಚೊಚ್ಚಲ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಆಗಿ ಭಾರತ ಹೊಮ್ಮಿದೆ. ಫೈನಲ್‌ನಲ್ಲಿ ಆಫ್ರಿಕಾ ವಿರುದ್ಧ 52 ರನ್‌ಗಳ ಜಯ ಸಾಧಿಸಿದ ಮೊದಲ ಬಾರಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. 2008ರಲ್ಲಿ ಭಾರತ ಮೊದಲ ಬಾರಿ ಫೈನಲ್‌ ಪ್ರವೇಶಿಸಿದಾಗ ಆಸೀಸ್‌ ವಿರುದ್ಧ 98 ರನ್‌ಗಳಿಂದ ಸೋತಿತ್ತು. 2017ರಲ್ಲಿ ಇಂಗ್ಲೆಂಡ್‌ ವಿರುದ್ಧ 9 ರನ್‌ಗಳ ವಿರೋಚಿತ ಸೋಲು ಕಂಡಿದ್ದ ಭಾರತ 3ನೇ ಬಾರಿಗೆ ಫೈನಲ್‌ನಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.