ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ.
ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದು, ಸಿ.ಎಂ.ಇಬ್ರಾಹಿಂಗೆ ರಾಜ್ಯಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.