ಚಿಕ್ಕಬಳ್ಳಾಪುರ: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ತಾಲ್ಲೂಕಿನ ಗಂಗೀರ್ಲಹಳ್ಳಿಯಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮದ 12 ಮನೆಗಳಿಗೆ ತೆರಳಿ ಕಂದಾಯ ದಾಖಲೆಯನ್ನು ನೀಡಿದರು.
ಗ್ರಾಮದ ಪ್ರವೇಶ ದ್ವಾರದಲ್ಲಿ ಪೂರ್ಣ ಕುಂಭ ಸ್ವಾಗತದೊಂದಿಗೆ ಮುಖ್ಯಮಂತ್ರಿ ಅವರನ್ನು ಬರಮಾಡಿಕೊಳ್ಳಲಾಯಿತು.
ಎತ್ತಿ ಗಾಡಿಯಲ್ಲಿ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ಕೆ.ಸುಧಾಕರ್, ಎಂ.ಟಿ.ಬಿ.ನಾಗರಾಜು, ಆರ್.ಅಶೋಕ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಇದ್ದರು. ಮೆರವಣಿಗೆಯಲ್ಲಿ ದೇಗುಲಕ್ಕೆ ತೆರಳಿದ ಮುಖ್ಯಮಂತ್ರಿ ಪೂಜೆ ಸಲ್ಲಿಸಿದರು. ಗ್ರಾಮದ ಹಳ್ಳಿ ಕಟ್ಟೆಯಲ್ಲಿ ಜನರ ಜತೆ ಸಂವಾದ ನಡೆಸಿದರು.














