ಚಿಕ್ಕಮಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಅಮಾಯಕರನ್ನೂ ಬಂಧಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣದ ತನಿಖೆ ನಡೆಯುತ್ತಿದೆ. ಸಾಕ್ಷ್ಯಾಧಾರ ಪರಿಗಣಿಸಿ ಪೊಲೀಸರು ಕ್ರಮ ವಹಿಸುತ್ತಿದ್ದಾರೆ. ಈ ಹಂತದಲ್ಲಿ ಪ್ರಕರಣದ ಬಗ್ಗೆ ಪದೇಪದೇ ಹೇಳಿಕೆ ನೀಡುವುದು, ವ್ಯಾಖ್ಯಾನ ಮಾಡುವುದು ಸರಿಯಲ್ಲ’ ಎಂದು ಉತ್ತರಿಸಿದರು.
ಮುಖ್ಯಮಂತ್ರಿಯಾದ ನಂತರ ಜಿಲ್ಲೆಗೆ ಮೊದಲ ಭೇಟಿ ಇದು. ಈ ಹಿಂದೆ ಎರಡು ಬಾರಿ ನಿಗದಿಯಾಗಿದ್ದ ಭೇಟಿ ಕಾರ್ಯಕ್ರಮ ಕಾರಣಾಂತರಗಳಿಂದ ರದ್ದಾಗಿತ್ತು. ನಾಡಿನಲ್ಲಿ ಸಮೃದ್ಧಿ ನೆಲೆಸುವಂತೆ ಮಾಡು ಎಂದು ಶಾರದಾಂಬೆಯಲ್ಲಿ ಪ್ರಾರ್ಥಿಸುತ್ತೇನೆ’ ಎಂದರು.