ಮನೆ ರಾಜ್ಯ ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ: ಬಿಜೆಪಿ ಶಾಸಕ ಸುರೇಶ್ ಗೌಡ

ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ: ಬಿಜೆಪಿ ಶಾಸಕ ಸುರೇಶ್ ಗೌಡ

0

ತುಮಕೂರು: ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನಿಡಿದ್ದಾರೆ.

Join Our Whatsapp Group

ನಗರದಲ್ಲಿ ಮಾಧ್ಯಮದವರೊಂದಿಗಿ ಮಾತನಾಡಿದ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇವರೆಲ್ಲರೂ ಡಿ.ಕೆ.ಸುರೇಶ್​ರನ್ನು ಸೋಲಿಸ್ತಾರೆಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ, ಈಗ ಅದು ರಿಪೀಟ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತಾ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ.ಸುರೇಶ್ ಸೋಲಿಸಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಸುರೇಶ್​ರನ್ನು ಸೋಲಿಸ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸುರೇಶ್​ರನ್ನು ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ ಎಂದು ಹೇಳಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚು ರೂಪಿಸಿದ್ದಾರೆ. ಡಿ.ಕೆ.ಶಿವಕುಮಾರ್​ ನೈತಿಕತೆ ಕುಸಿಯಬೇಕು ಅಂತಾ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರವೂ ಉಳಿಯಲ್ಲ. ರಾಜಕೀಯ ಧ್ರುವೀಕರಣ ಶುರುವಾಗುತ್ತೆ ಎಂದಿದ್ದಾರೆ.

ಕಾಂಗ್ರೆಸ್​ ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರ ಸೋಲಿನಿಂದ ಇಲ್ಲೂ ಜಗಳ ಶುರುವಾಗಿದೆ. ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.

ಜೂನ್ 4 ರಂದು, ಭಾರತೀಯ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನು 2,69,647 ರಿಂದ ಸೋಲಿಸಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಪ್ರವೇಶದ ಮೊದಲ ಹೆಜ್ಜೆಯಲ್ಲೇ ಪ್ರಭಾವಿ ನಾಯಕನನ್ನು ಮಣಿಸಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮಂಜುನಾಥ್ ಅವರು 10,79,002 ಮತಗಳನ್ನು ಪಡೆದುಕೊಂಡಿದ್ದು, ಡಿಕೆ ಸುರೇಶ್ ಅವರ 8,09,355 ಮತಗಳನ್ನು ಪಡೆದ್ದಾರೆ.

ಹಿಂದಿನ ಲೇಖನಹಾಟ್ ಫೇಲ್ಯೂರ್: ಭಾಗ-3
ಮುಂದಿನ ಲೇಖನ ‘ಅನರ್ಥ’ ಸಿನಿಮಾ ವಿಮರ್ಶೆ