ಮೈಸೂರು: ಮುಡಾದಿಂದ ತಮ್ಮ ಪತ್ನಿ ಕೋಟ್ಯಂತರ ರೂ. ಮೌಲ್ಯದ ನಿವೇಶನ ಪಡೆಯಲು ಪ್ರಭಾವ ಬೀರಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಬುಧವಾರ(ನ6)ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.
ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು ರಸ್ತೆ ಮಾರ್ಗವಾಗಿ ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರು 10 ಗಂಟೆಗೆ ಸರಿಯಾಗಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಬಿಜೆಪಿ ಪ್ರತಿಭಟನೆ
ಮೈಸೂರಿನ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಾಯುಕ್ತ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಕಚೇರಿ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಲೋಕಾಯುಕ್ತ ವಿಚಾರಣೆ ಮುಗಿದ ಬಳಿಕ ಚನ್ನಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.