ಮನೆ ಸುದ್ದಿ ಜಾಲ ಸಿಎಂ ಸಿದ್ದರಾಮಯ್ಯ: ಕೆಪಿಎಸ್  800 ಶಾಲೆ ತೆರೆಯಲು ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸೂಚನೆ

ಸಿಎಂ ಸಿದ್ದರಾಮಯ್ಯ: ಕೆಪಿಎಸ್  800 ಶಾಲೆ ತೆರೆಯಲು ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸೂಚನೆ

0

ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯುವ ಸಂಬಂಧ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದು. ಗೃಹ ಕಚೇರಿ ಕೃಷ್ಣಾದಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದರು ಎನ್ನಬಹುದು.

ಈ ಕುರಿತು ಜೂನ್ 1ರಿಂದ ಶಾಲೆಗಳು ಆರಂಭವಾಗುತ್ತಿದ್ದು, ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಕ್ರಮ ಕೈಗೊಳ್ಳಬೇಕು. ಎಲ್​ಕೆಜಿಯಿಂದ 10ನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಶಿಕ್ಷಣ ದೊರೆಯಲು ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ 800 ಶಾಲೆಗಳು ಪ್ರಾರಂಭವಾಗಲು ಟೆಂಡರ್ ಪ್ರಕ್ರಿಯೆ ಬೇಗ ನಡೆಸಬೇಕು ಎಂದು ಸೂಚಿಸಿದರು. ಶಿವಮೊಗ್ಗದಲ್ಲಿ ಜೂನ್ 1ರಂದು ಕೆಪಿಎಸ್ ಶಾಲೆಗೆ ಚಾಲನೆ ನೀಡಲಾಗುವುದು. ಒಂದು ಕೆಪಿಎಸ್ ಶಾಲೆಯಲ್ಲಿ 1,200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದೆ. ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯ ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಈ ಬಾರಿ ಎಸ್​ಎಸ್​ಎಲ್​ಸಿಯಲ್ಲಿ ಶೇ. 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.14.06 ಹೆಚ್ಚಾಗಿದೆ. ಪಿಯುಸಿಯಲ್ಲಿ ಈ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕಿಂತ ಶೇ.13ರಷ್ಟು ಹೆಚ್ಚಳವಾಗಿದೆ. ಎಸ್​ಎಸ್​ಎಲ್​ಸಿಯಲ್ಲಿ ಈ ವರ್ಷ ಶೇ.100ರಷ್ಟು ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2,393 ಇದ್ದು, ಕಳೆದ ವರ್ಷ 766 ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದವು.

ಹಾಗೆ ಈ ಬಾರಿ ಎಸ್​ಎಸ್​ಎಲ್​ಸಿಯಲ್ಲಿ ಎಸ್​ಸಿ ಮತ್ತು ಎಸ್​ಟಿ ವಿದ್ಯಾರ್ಥಿಗಳ ಫಲಿತಾಂಶ ಶೇ.18ರಷ್ಟು ಹೆಚ್ಚಳವಾಗಿದೆ. ಅದೇ ರೀತಿ, ಎಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶ ಗಣನೀಯವಾಗಿ ಸುಧಾರಣೆಯಾಗಿದೆ. ಕಲಾಣ್ಯ ಕರ್ನಾಟಕದಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.2ರಷ್ಟು ಹೆಚ್ಚಾಗಿದೆ. ಈ ಬಾರಿ ಯಾವುದೇ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿಲ್ಲ. ಈ ಬಾರಿ ಎಸ್​ಎಸ್​ಎಲ್​ಸಿ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ. ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳೊಂದಿಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಯಿತು ಎಂದು ಸಭೆಯಲ್ಲಿ ತಿಳಿಸಲಾಯಿತು. ಫಲಿತಾಂಶ ಉತ್ತಮಪಡಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಪಠ್ಯ ಆಧಾರಿತ ಅಧ್ಯಯನ ಕ್ರಮ ರೂಪಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಪೂರ್ವ ಭಾವಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಕಾಲ ಕಾಲಕ್ಕೆ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ ಮೇಲ್ವಿಚಾರಣೆ ಕೈಗೊಳ್ಳಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಉತ್ತಮಗೊಳ್ಳಲು ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು ಎನ್ನಲಾಗುತ್ತಿದೆ.