ಮನೆ ಸ್ಥಳೀಯ ಕಬಿನಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬಾಗಿನ ಅರ್ಪಣೆ

ಕಬಿನಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬಾಗಿನ ಅರ್ಪಣೆ

0

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ,ಬಾಗಿನ‌ ಅರ್ಪಿಸಿದರು.

Join Our Whatsapp Group


ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ನೆರೆಯ ತಮಿಳುನಾಡು ರಾಜ್ಯಕ್ಕೆ ನಾವು ನೀರು ಬಿಡಬೇಕಿತ್ತು. ಕಬಿನಿ ಜಲಾಶಯ ಮೊದಲು ಭರ್ತಿಯಾಗಿದ್ದಕ್ಕೆ ತಮಿಳುನಾಡಿಗೆ ನೀರನ್ನು ಹರಿಸಲಾಗಿದೆ. ಈ ಹಿನ್ನೆಲೆಯಲ್ಲಿ ತುಂಬಾ ಸಂತೋಷದಿಂದ ನಾನು, ಸಿಎಂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇವೆ ಎಂದು ಖುಷಿಪಟ್ಟರು.
ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ,‌ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಪಿ.ಎಂ.ನರೇಂದ್ರ ಸ್ವಾಮಿ, ಸಿ.ಎಸ್.ಪುಟ್ಟರಂಗಶೆಟ್ಟಿ, ಎಚ್.ಎಂ.ಗಣೇಶ್ ಪ್ರಸಾದ್ ಪಾಲ್ಗೊಂಡಿದ್ದರು.