ಮನೆ ಸುದ್ದಿ ಜಾಲ ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು : ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿ.27 ರಂದು ದೆಹಲಿಯಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದ್ದು, ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಕರ್ನಾಟಕದ ಸಿಎಂ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ CWC ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಮೊದಲು ಸಿಡಬ್ಲ್ಯೂಸಿ ಸಭೆಗೆ ನನಗೆ ಆಹ್ವಾನವಿಲ್ಲ ಎಂದು ಸಿಎಂ ಹೇಳಿದ್ದರು. ಈಗ ನಾಳೆ ಸಿಎಂ ದೆಹಲಿಗೆ ಹೋಗುವುದು ಅಧಿಕೃತವಾಗಿದೆ. ಐದು ರಾಜ್ಯಗಳ ಚುನಾವಣೆ, ಓಟ್ ಚೋರಿ, ನ್ಯಾಷನಲ್ ಹೆರಾಲ್ಡ್ ಮತ್ತು ಮನರೇಗಾ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.