ಮನೆ ರಾಜ್ಯ ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

0

ಬೀದರ್/ಕಲಬುರಗಿ : ಏ.11ರಂದು ಸಿಎಂ ಸಿದ್ದರಾಮಯ್ಯ ಅವರು ಬೀದರ್ ಹಾಗೂ ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.11ರಂದು ಬೀದರ್‌ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಬೀದರ್‌ನಿಂದ ಕಲಬುರಗಿಗೆ ತೆರಳಲಿದ್ದಾರೆ.

ಈ ವೇಳೆ ಕಲಬುರಗಿಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರರ ದೇವಸ್ಥಾನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.