ಮನೆ ರಾಜಕೀಯ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ ಸಲ್ಲಿಸಿದ ಸಿಎಂ

ಶ್ರೀಕಂಠೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ ಸಲ್ಲಿಸಿದ ಸಿಎಂ

0

ಬೆಂಗಳೂರು: ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಳಗ್ಗೆ ಆರ್ ಟಿ ನಗರ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ರೇಸ್ ಕೋರ್ಸ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಅವರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದರು.

ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ ಸಿ ಜಾಫರ್ ಅವರು ಸಿಎಂ ಬೊಮ್ಮಾಯಿ ಅವರಿಗೆ ಬಜೆಟ್‌ ಪುಸ್ತಕ ಹಸ್ತಾಂತರಿಸಿದರು. ಈ ಸಂದರ್ಭ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಬೈರತಿ ಬಸವರಾಜ ಉಪಸ್ಥಿತರಿದ್ದರು.