ಮನೆ ರಾಷ್ಟ್ರೀಯ ಸಿಎಂ ಯೋಗಿ ಆದಿತ್ಯನಾಥ್‌ ಅವರ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಸಿಎಂ ಯೋಗಿ ಆದಿತ್ಯನಾಥ್‌ ಅವರ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

0

ವಾರಾಣಸಿ (Varanasi): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಯೋಗಿ ಆದಿತ್ಯನಾಥ್‌ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ತಕ್ಷಣ ಹೆಲೆಕಾಪ್ಟರ್‌ ಅನ್ನು ವಾರಾಣಸಿಯಲ್ಲು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಎರಡು ದಿನ ವಾರಾಣಸಿ ಪ್ರವಾಸದಲ್ಲಿದ್ದ ಯೋಗಿ ಆದಿತ್ಯನಾಥ್ ಅವರು, ಬಳಿಕ ವಿಮಾನದಲ್ಲಿ ರಾಜಧಾನಿ ಲಖನೌಗೆ ಮರಳಿದ್ದಾರೆ. ವಾರಾಣಸಿಯಿಂದ ಲಖನೌಗೆ ಹೊರಟಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಹಕ್ಕಿಯೊಂದು ಕಿಟಕಿಗೆ ಡಿಕ್ಕಿ ಹೊಡೆದಿದೆ. ಪೈಲಟ್ ಕೂಡಲೇ ಅದರ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಯೋಗಿ ಆದಿತ್ಯನಾಥ್ ಅವರ ಜತೆ ಅವರ ಸಿಬ್ಬಂದಿ ಕೂಡ ಇದ್ದರು ಎಂದು ವರದಿಯಾಗಿದೆ.

ಯೋಗಿ ಆದಿತ್ಯನಾಥ್ ಅವರು ಶನಿವಾರ ವಾರಾಣಸಿಗೆ ಆಗಮಿಸಿದ್ದರು. ನಗರದಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ಪರಾಮರ್ಶನಾ ಸಭೆ ನಡೆಸಿದ್ದಾರೆ.

ಹಿಂದಿನ ಲೇಖನಕೋವಿಡ್‌ : ದೇಶದಲ್ಲಿ 11,739 ಪ್ರಕರಣ
ಮುಂದಿನ ಲೇಖನಬೆಳಗಾವಿಯಲ್ಲಿ ಭೀಕರ ಅಪಘಾತ: ಮೃತ ಕಾರ್ಮಿಕ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ