ಮಂಡ್ಯ: ಮಂಡ್ಯ ಭಾಗದಲ್ಲಿ ತೆಂಗು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ರೈತರ ಜೀವನಾಧಾರವಾಗಿದೆ. ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಅವರು ಅಭಿಪ್ರಾಯ ಪಟ್ಟರು.
ಅವರು ಇಂದು ತೋಟಗಾರಿಕೆ ಇಲಾಖೆಯ ಸಭಾಂಗಣದಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಕೊಚ್ಚಿರವರ ಸಹಯೋಗದೊಂದಿಗೆ, ತೋಟಗಾರಿಕೆ ಇಲಾಖೆ ವತಿಯಿಂದ ನಡೆದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಇಲಾಖಾ ಅಧಿಕಾರಿಗಳಿಗೆ ತಾಂತ್ರಿಕ ಸಾಮರ್ಥಾಭಿವೃದ್ಧಿ ಕಾರ್ಯಗಾರದಲ್ಲಿ ವಿಡಿಯೋ ಸಂವಾದ ಮೂಲಕ ಭಾಗಿಯಾಗಿ ಮಾತನಾಡಿದರು.
ಹೋಬಳಿ, ತಾಲೂಕು ಮಟ್ಟದಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ತಮ್ಮ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ರೈತರಿಗೆ ಕೀಟ ಮತ್ತು ರೋಗಗಳ ನಿಯಂತ್ರಣದ ಬಗ್ಗೆ ಹಾಗೂ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಗಾರವನ್ನು ಯಶಸ್ವಿಯಾಗಿ ಬಳಸಿಕೊಂಡು ರೈತರಿಗೆ ಅನುಕೂಲವಾಗುತಂಹ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದರು.
ಮೈಸೂರು ವಿಭಾಗ ತೋಟಗಾರಿಕೆ ಜಂಟಿ ನಿರ್ದೇಶಕರು ಮಾತನಾಡಿ ತೆಂಗು ಬೆಳೆಯು ಮಂಡ್ಯ ಭಾಗದ ಮುಖ್ಯ ತೋಟಗಾರಿಕೆ ಬೆಳೆಯಾಗಿದ್ದು, ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ತೆಂಗಿನ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆಯ ಬಗ್ಗೆ ವಿಚಾರವನ್ನು ಮನನ ಮಾಡಿಕೊಂಡು ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ಸೃಷ್ಟಿಸಿ ಹಾಗೂ ರೈತರು ತೆಂಗಿನಿAದ ಹೆಚ್ಚಿನ ಆದಾಯ ಗಳಿಸುವ ನಿಟ್ಟಿನಲ್ಲಿ ಕ್ಷೇತ್ರ ಮಟ್ಟದ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಅರಸೀಕೆರೆ ಪರಿಶೋಧನಾ ಕೇಂದ್ರ ವಿಜ್ಞಾನಿಗಳಾದ ಡಾ. ಜಗದೀಶ್, ಡಾ. ಸುದರ್ಶನ್ ಹಾಗೂ ಡಾ. ಪ್ರಶಾಂತ್ ಅಧಿಕಾರಿಗಳಿಗೆ ತೆಂಗನ್ನು ಬೆಳೆಯುವ ರೀತಿ, ಕೀಟ ಮತ್ತು ರೋಗಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಅಂತಿಮವಾಗಿ ತಂಡವು, ಮದ್ದೂರಿನಲ್ಲಿ ಕಪ್ಪು ತಲೆ ಹುಳುವಿನಿಂದ ಭಾದೆಗೊಳಗಾದ ತೈಲೂರು, ಮಾದನಾಯಕನಹಳ್ಳಿ, ವೈದ್ಯನಾಥಪುರ ಭಾಗದ ವಿವಿಧ ರೈತರ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರು ಕೀಟ ನಿರ್ವಹಣೆಯ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕರು ರೂಪಶ್ರೀ, ಬೆಂಗಳೂರು ತೆಂಗು ಅಭಿವೃದ್ಧಿ ಮಂಡಳಿಯ ನಿರ್ದೇಶಕರು ರಶ್ಮಿ, ಸಿಡಿಬಿ ಉಪನಿರ್ದೇಶಕರು ಗುರುರಾಜ್ ಮತ್ತು ಇನ್ನಿತರರು ಹಾಜರಿದ್ದರು.














