ಮನೆ ಉದ್ಯೋಗ ಕಾಫಿ ಬೋರ್ಡ್​ ನೇಮಕಾತಿ: ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಕಾಫಿ ಬೋರ್ಡ್​ ನೇಮಕಾತಿ: ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

0

ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿಗಳನ್ನು ಕಳುಹಿಸಬಹುದು.

Join Our Whatsapp Group

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ಕಾಫಿ ಬೋರ್ಡ್ ಆಫ್ ಇಂಡಿಯಾ

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಯ ಹೆಸರು: ತಾಂತ್ರಿಕ ಸಹಾಯಕರು

ಶೈಕ್ಷಣಿಕ ಅರ್ಹತೆ:

ಕಾಫಿ ಬೋರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು .

ವಯೋಮಿತಿ:

ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಆಸಕ್ತರು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರ ರೂ. ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ- cqd.coffeeboard@gmail.com ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23-07-2023

ಅರ್ಜಿ ಡೌನ್ ​ಲೋಡ್ ಮಾಡುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್ ​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.